ಮೈಸೂರು: ‘ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆಯೋ ಇಲ್ಲವೋ ಎನ್ನುವುದು ಇನ್ನೂ ಖಚಿತವಾಗಿಲ್ಲ’ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.

‘ಜಂಬೂಸವಾರಿಗೆ ಪ್ರಧಾನಿ ಚಾಲನೆ ನೀಡುತ್ತಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ನಡೆದಿರುವ ಚರ್ಚೆ ಬಗ್ಗೆ ಗುರುವಾರ ಪ್ರತಿಕ್ರಿಯಿಸಿದ ಸಂಸದ, ‘ಯೋಗ ದಿನಕ್ಕೆ ಬಂದಿದ್ದಾಗಲೇ ಮೋದಿ ದಸರಾ ನೋಡುವ ಇಚ್ಛೆ ವ್ಯಕ್ತಪಡಿಸಿದ್ದರು. ಈ ಕಾರಣದಿಂದ, ದಸರಾ ಕಾರ್ಯಕ್ರಮಗಳ ಬಗ್ಗೆ ತಿಳಿಯಲು ಪ್ರಧಾನಿ ಕಾರ್ಯಾಲಯದಿಂದ ಮುಖ್ಯ ಕಾರ್ಯದರ್ಶಿಗೆ ಫೋನ್ ಕರೆ ಬಂದಿತ್ತು. ಆದರೆ, ಪ್ರವಾಸದ ಬಗ್ಗೆ ಅಧಿಕೃತ ಮಾಹಿತಿ ಈಗ ಇಲ್ಲ’ ಎಂದರು.

‘ಯೋಗ ದಿನಕ್ಕೆ ಬಂದಿದ್ದಾಗಲೇ ಪ್ರಧಾನಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದರು. ಆಗ, ಮತ್ತೊಮ್ಮೆ ದರ್ಶನಕ್ಕೆ ಬರುವ ಇಚ್ಛೆ ವ್ಯಕ್ತಪಡಿಸಿದ್ದರು. ದಸರಾ ವೇಳೆ ಆ ದೇವಿ ದರ್ಶನ ಪಡೆಯುವುದು ಇನ್ನೂ ವಿಶೇಷ. ಹೀಗಾಗಿ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ತೆಗೆದುಕೊಳ್ಳಲಾಗಿದೆ. ದಸರಾ ಸಿದ್ಧತೆ ಹೇಗಿದೆ, ಪ್ರಧಾನಿ ಬರುವುದಾದರೆ ಯಾವಾಗ ಬಂದರೆ ಉತ್ತಮ ಎಂಬ ಮಾಹಿತಿ ಪಡೆದಿದ್ದಾರೆ. ರಾಷ್ಟ್ರಪತಿ ಬರುತ್ತಿರುವುದರಿಂದಾಗಿ ಪ್ರಧಾನಿ ಆಗಮಿಸುವ ಬಗ್ಗೆ ನಿಶ್ಚಿತವಾಗಿ ಹೇಳಲಾಗದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.