ಶುಕ್ರವಾರ, ಅಕ್ಟೋಬರ್ 23, 2020
27 °C

ಟೋಲ್‌ನಲ್ಲಿ ಕೊಲೆ: ಮೂವರ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಟೋಲ್ ಗೇಟ್ ಬಳಿ ನಡೆದ, ಟೋಲ್‌ ಸಿಬ್ಬಂದಿ ಗಣೇಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಗ್ರಾಮಾಂತರ ದಕ್ಷಿಣ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಕಾಂತ್, ದೀಪಕ್, ಮಹೇಶ್‌ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಎಸ್‌ಪಿ ಭೇಟಿ: ಕೊಲೆಯಾದ ಸ್ಥಳಕ್ಕೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಟೋಲ್‌ ಸಿಬ್ಬಂದಿ ತಮ್ಮ ಸಮಸ್ಯೆ, ಅಹವಾಲನ್ನು ಎಸ್‌ಪಿ ಬಳಿ ಹೇಳಿಕೊಂಡರು. ಸಿಬ್ಬಂದಿಯ ಅಳಲಿಗೆ ಸ್ಪಂದಿಸಿದ ರಿಷ್ಯಂತ್ ಭದ್ರತೆ ಹೆಚ್ಚಿಸುವಂತೆ ಗ್ರಾಮಾಂತರ ಪೊಲೀಸರಿಗೆ ಸೂಚಿಸಿದರು.

ನಾಪತ್ತೆಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ, ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು