ಸೋಮವಾರ, ಸೆಪ್ಟೆಂಬರ್ 20, 2021
20 °C

ಕೊಲೆ ಶಂಕೆ; ಮೂವರ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದ ಶಾರದಾದೇವಿನಗರದ ನಿವಾಸಿಯೊಬ್ಬರು ನಾಪತ್ತೆಯಾಗಿದ್ದು, ಕೊಲೆ ಶಂಕೆ ಮೂಡಿದೆ.

ಈ ಸಂಬಂಧ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಾಪತ್ತೆಯಾದ ವ್ಯಕ್ತಿಯು ಆಟೊ ಚಾಲಕರಾಗಿದ್ದು, ಕೆಲವರೊಂದಿಗೆ ಬೋಗಾದಿ ಪೆಟ್ರೊಲ್‌ ಬಂಕ್ ಹಿಂಭಾಗ ಆಗಸ್ಟ್ 28ರಂದು ಸಂಜೆ ಕಾಣಿಸಿಕೊಂಡಿದ್ದರು. ಈ ವೇಳೆ ನಡೆದ ಗಲಾಟೆ ಘಟನೆ ಬಳಿಕ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ.

ಇವರನ್ನು ಕೊಲೆ ಮಾಡಿ ಹೂತಿರುವ ಶಂಕೆ ವ್ಯಕ್ತವಾಗಿರುವುದರಿಂದ ಶಂಕಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ‘ವ್ಯಕ್ತಿಯು ನಾಪತ್ತೆಯಾಗಿದ್ದು, ಹುಡುಕಾಟ ನಡೆದಿದೆ. ಕೆಲವು ಸಂಶಯಗಳ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ನಾಪತ್ತೆ ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.