ಭಾನುವಾರ, ಏಪ್ರಿಲ್ 5, 2020
19 °C

ಮೈಸೂರು: ನಿಷೇಧಾಜ್ಞೆ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೋವಿಡ್-19 ರೋಗ ರಾಜ್ಯದ ಎಲ್ಲೆಡೆ ಹೆಚ್ಚಿನ ಜನರಲ್ಲಿ ಹರಡುತ್ತಿದ್ದು, ಮೈಸೂರು ನಗರದಲ್ಲಿಯೂ ಪತ್ತೆಯಾಗಿರುವುದರಿಂದ, ಕೊರೊನಾ ವೈರಸ್‍ನ ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದನ್ವಯ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸಿ.ಆರ್.ಪಿ.ಸಿ ಸೆಕ್ಷನ್ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್ 23ರ ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 31ರ ಮಧ್ಯರಾತ್ರಿ 12 ಗಂಟೆಯವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ, 5ಕ್ಕಿಂತ ಹೆಚ್ಚು ಸಾರ್ವಜನಿಕರು ಒಟ್ಟಾಗಿ ಸೇರುವುದನ್ನು ನಿರ್ಬಂಧಿಸಿ ನಿಷೇಧಾಜ್ಞೆ ಘೋಷಿಸಿದ್ದಾರೆ.

ನಿಷೇಧಾಜ್ಞೆಯ ಸಮಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಓಡಾಡುವುದನ್ನು ಹಾಗೂ ಗುಂಪು ಸೇರುವುದನ್ನು ನಿಷೇಧಾಜ್ಞೆಯ ಉಲ್ಲಂಘನೆಯೆಂದು ಪರಿಗಣಿಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ವಾಹನಗಳಿಗೆ ನಿರ್ಬಂಧ

ಮೈಸೂರು: ಕೋವಿಡ್-19 ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಖಾಸಗಿ ವಾಹನಗಳಾದ ಬಸ್, ಟೆಂಪೊ ಟ್ರಾವೆಲರ್, ಟಾಟಾ ಮ್ಯಾಜಿಕ್, ವಿಂಗರ್, ಆಟೊರಿಕ್ಷಾ ಸೇರಿದಂತೆ ಮುಂತಾದ ವಾಹನಗಳಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮೋಟಾರು ವಾಹನ ಕಾಯ್ದೆ ಕಲಂ 115ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಬಂಧಿಸಲು ಆದೇಶಿಸಿದ್ದಾರೆ.

ನೊವೆಲ್ ಕೊರೊನಾ ಸಾಂಕ್ರಾಮಿಕ ವೈರಾಣು, ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆಯೇ ಹೆಚ್ಚಿರುವುದರಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ ಖಾಸಗಿ ಸಮೂಹ ಸಾರಿಗೆ ವಾಹನಗಳು ಹಾಗೂ ಎಲ್ಲಾ ರೀತಿಯ ಸಮೂಹ ಸಾರಿಗೆ ವಾಹನಗಳ ಸಂಚಾರವನ್ನು ಮಾರ್ಚ್ 23ರ ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 31ರ ಮಧ್ಯರಾತ್ರಿ 12 ಗಂಟೆವರೆಗೆ ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)