ಮೈಸೂರು: ಬೆಲೆ ಏರಿಕೆ ವಿರೋಧಿಸಿ ಜುಲೈ 7 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೈಕಲ್ ಜಾಥಾ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಅವರು ಭಾನುವಾರ ಸಹಾಯ ಹಸ್ತ ಕಾರ್ಯಕ್ರಮದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಾಥಾಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ. 5 ಕಿ.ಮೀವರೆಗೆ ಜಾಥಾ ಸಂಚರಿಸಲಿದೆ ಎಂದು ಅವರು ಹೇಳಿದರು.

ಸಹಾಯಹಸ್ತ ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 20 ಜನರನ್ನು ಕೊರೊನಾ ವಾರಿಯರ್ ಎಂದು ಆಯ್ಕೆ ಮಾಡಿ, ಅವರು ಕೊರೊನಾದಿಂದ ನೊಂದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಅವರು ಹೇಳಿದರು.

ಬಹಳಷ್ಟು ಮಂದಿ ಕೊರೊನಾದಿಂದ ಮೃತಪಟ್ಟವರಿಗೆ ಕೋವಿಡ್ ಮರಣ ಪ್ರಮಾಣ ಪತ್ರ ನೀಡಿಲ್ಲ. ಹಾಗಾಗಿ ಸಾಂತ್ವನದ ಜತೆಯಲ್ಲಿ ಪರಿಷ್ಕೃತ ಮರಣಪ ಪ್ರಮಾಣ ಪತ್ರದ ಅರ್ಜಿಯನ್ನು ವಿತರಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 30 ಸಾವಿರ ಮಂದಿ ಕೋವಿಡ್ ನಿಂದ ಮೃತ ಪಟ್ಟಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ 3.5 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.