ಮೈಸೂರು: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಸೇರಿದಂತೆ ಕಚೇರಿಯ 22 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯನ್ನು ಸ್ಯಾನಿಟೈಸ್ ಮಾಡಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಶನಿವಾರ ಮತ್ತು ಭಾನುವಾರ ರಜೆ ಇದ್ದು ಸೋಮವಾರ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಸದ್ಯ, ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲೆಯ 1ರಿಂದ 10ನೇ ತರಗತಿವರೆಗಿನ 32 ಮಕ್ಕಳಲ್ಲಿ ಶುಕ್ರವಾರ ಸೋಂಕು ದೃಢಪಟ್ಟಿದ್ದು, 239 ಮಕ್ಕಳು ಸೋಂಕಿನಿಂದ ಬಳಲುತ್ತಿದ್ದಾರೆ. ಒಂದು ವಾರದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 22 ಶಿಕ್ಷಕರಿಗೂ ಸೋಂಕು ತಗುಲಿದ್ದು, ಒಟ್ಟು 134 ಶಿಕ್ಷಕರು ಸೋಂಕಿತರಾಗಿದ್ದಾರೆ. 15ರಿಂದ 18 ವರ್ಷದೊಳಗಿನ 4,254 ಮಕ್ಕಳು ಇನ್ನೂ ಕೋವಿಡ್ ಲಸಿಕೆ ಪಡೆದಿಲ್ಲ.ಡಾ. ಕಣವಿಗೆ ಕೋವಿಡ್ ನೆಗೆಟಿವ್: ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ವಾರ್ಡ್ಗೆ ಸ್ಥಳಾಂತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.