ಸೋಮವಾರ, ಜೂನ್ 21, 2021
22 °C

ಮೈಸೂರು: ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೋವಿಡ್-‌19 ಸೋಂಕಿತ ಮಹಿಳೆಯೊಬ್ಬರು ಆಸ್ಪತ್ರೆಗೆ ಹೋಗುವಾಗ ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.  ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ಸವಿತಾ (26) ಎನ್ನುವವರೇ ಮಗುವಿಗೆ ಜನ್ಮ ನೀಡಿದವರು.

ಕೋವಿಡ್‌ ದೃಢಪಟ್ಟಿದ್ದರಿಂದಾಗಿ ಮಹಿಳೆಯನ್ನು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲು ಸಿಬ್ಬಂದಿ ಹಿಂದೇಟು ಹಾಕಿದ್ದರು. ಆದರೆ, ಅಧಿಕಾರಿಗಳು ಸೂಚಿಸಿದ ನಂತರ ಮೈಸೂರಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಜಿಲ್ಲೆಯ ಚಿಕ್ಕಳ್ಳಿ ಗ್ರಾಮದ ಬಳಿ ಹೆರಿಗೆಯಾಗಿದೆ.

ಸದ್ಯ ಮಹಿಳೆ ಮತ್ತು ಮಗು ವಿ.ವಿ. ಪುರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು