ಬುಧವಾರ, ಅಕ್ಟೋಬರ್ 28, 2020
24 °C

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಾಡ ಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆ ಪಯಣಕ್ಕೆ ಗುರುವಾರ ನಾಗರಹೊಳೆ ದ್ವಾರದ ಬಳಿಯಲ್ಲೇ‌ ಚಾಲನೆ ನೀಡಲಾಯಿತು.

ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಿಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ  ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.

ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೋವಿಡ್ ಹಿನ್ನೆಲೆ ಈ ಬಾರಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಅಲೆಗ್ಸಾಂಡರ್, ಮಹೇಶ್‌ಕುಮಾರ್, ಡಾ.ಕೆ.ಸಿ.ಪ್ರಶಾಂತ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಅಂಟೋನಿ ಪೌಲ್ ಇನ್ನಿತರರು ಉಪಸ್ಥಿತರಿದ್ದರು.


ಗಜಪಡೆ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು