ಗುರುವಾರ , ಮಾರ್ಚ್ 4, 2021
30 °C

ಮೈಸೂರು ದಸರಾ: ಪೂರ್ವಭಾವಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರು ದಸರಾ 2019ರ ಉನ್ನತಾಧಿಕಾರ ಸಮಿತಿ ಸಭೆ ಆ.9ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದ್ದು, ಸೋಮವಾರ ಜಿಲ್ಲಾಧಿಕಾರಿ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿದರು.

ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ನೀಡುವ ಸೂಚನೆಯಂತೆ, ಈ ಬಾರಿಯ ದಸರಾ ಮಹೋತ್ಸವವನ್ನು ಆಚರಿಸಬೇಕಾಗುತ್ತದೆ. ಇದಕ್ಕೆ ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.

ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಕೈಗೊಳ್ಳುವ ಸ್ವಚ್ಛತೆ, ನೈರ್ಮಲ್ಯ ಮುಂತಾದ ಕಾರ್ಯಕ್ರಮಗಳಿಗೆ ಬೇಕಾದ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಸೂಚಿಸಿದರು.

ದೀಪಾಲಂಕಾರ ಕಳೆದ ವರ್ಷ ಎಲ್ಲರ ಮೆಚ್ಚುಗೆ ಪಡೆದುಕೊಂಡಿತ್ತು. ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ನೀಡುವ ಸೂಚನೆಗೆ ಅನುಗುಣವಾಗಿ ಈ ಬಾರಿಯೂ ಎಲ್ಲರೂ ಮೆಚ್ಚುವಂತೆ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲು ತಿಳಿಸಲಾಯಿತು.

ಉನ್ನತಾಧಿಕಾರ ಸಮಿತಿ ಸಭೆ ನಂತರ ಅಧಿಕಾರಿಗಳ ಸಭೆ ಕರೆಯಲಾಗುವುದು. ಆ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ಮುಡಾ ಆಯುಕ್ತ ಕಾಂತರಾಜು, ಡಿ.ಸಿ.ಪಿ.ಕವಿತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪಿ.ವಿ.ಸ್ನೇಹಾ ಸಭೆಯಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು