ಭಾನುವಾರ, ಡಿಸೆಂಬರ್ 4, 2022
20 °C

‘ದಸರಾ ರಂಗೋತ್ಸವ’ಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ದಸರಾ ಅಂಗವಾಗಿ ರಂಗಾಯಣದಿಂದ ಆಯೋಜಿಸಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ನೆನಪಿನ ‘ದಸರಾ ರಂಗೋತ್ಸವ’ಕ್ಕೆ ಭಾನುವಾರ ಚಾಲನೆ ದೊರೆಯಿತು.

ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ಅಧ್ಯಕ್ಷ ಸುರೇಶ್ ಬಾಬು ಉದ್ಘಾಟಿಸಿದರು. ಉಪ ನಿರ್ದೇಶಕಿ ನಿರ್ಮಲಾ ಮಠಪತಿ, ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹಾಗೂ ರಂಗ ಸಮಾಜದ ಸದಸ್ಯ ಶೀನ ನಡೋಳಿ ಪಾಲ್ಗೊಂಡಿದ್ದರು.

ಬಳಿಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕಥೆ, ಆರ್.ನಾಗೇಶ್ ನಿರ್ದೇಶನದ ‘ಕೃಷ್ಣೇಗೌಡನ ಆನೆ’ ನಾಟಕವನ್ನು ರಂಗಾಯಣ ರೆಪರ್ಟರಿ ತಂಡದವರು ಪ್ರದರ್ಶಿಸಿದರು. ಅ.4ರವರೆಗೆ ಪ್ರತಿ ನಿತ್ಯ ಸಂಜೆ 6.30ಕ್ಕೆ ‘ಭೂಮಿಗೀತ’ ರಂಗಮಂದಿರದಲ್ಲಿ ನಾಟಕಗಳ ಪ್ರದರ್ಶನ ಇರಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು