ಮಂಗಳವಾರ, ನವೆಂಬರ್ 30, 2021
23 °C

ಮೈಸೂರು ದಸರಾ: ಜಂಬೂಸವಾರಿಗೆ ಅರಮನೆಯಲ್ಲಿ ನಡೆದಿದೆ ಭರದ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿಗಾಗಿ ಇಲ್ಲಿನ ಅರಮನೆಯಲ್ಲಿ ಸಿದ್ದತಾ ಕಾರ್ಯಗಳು ಭರದಿಂದ ನಡೆದಿವೆ.

ವಿವಿಧ ಕಲಾತಂಡಗಳು ಅಲಂಕಾರ ಮೊದಲಾದ ಪ್ರಕ್ರಿಯೆಯಲ್ಲಿ ತೊಡಗಿವೆ. ಕೆಲವು ಸ್ತಬ್ಧಚಿತ್ರಗಳು ಈಗಾಗಲೇ ಅಣಿಗೊಂಡಿವೆ. ಅಂಬಾರಿಯ ಉತ್ಸವಮೂರ್ತಿಯ ಆಗಮನಕ್ಕೆ ಎದುರುನೋಡಲಾಗುತ್ತಿದೆ.


-ಚಾಮುಂಡೇಶ್ವರಿ ದೇವಿ

ಅಂಬಾರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ
ಮೈಸೂರು: ದಸರಾ ಮಹೋತ್ಸವದ  ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಮೇಲೆ ವಿರಾಜಮಾನವಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಪುಷ್ಪಾರ್ಚನೆ ಮಾಡಿದರು.

ಅಲಂಕೃತ ವಾಹನದಲ್ಲಿ ನಾದಸ್ವರ ವಿವಿಧ ಕಲಾತಂಡಗಳ ಜೊತೆಗೆ ಬೆಟ್ಟದಲ್ಲಿ ಮೆರವಣಿಗೆ ಮಾಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು