ಮಂಗಳವಾರ, ಮಾರ್ಚ್ 31, 2020
19 °C

ಮೈಸೂರು: ಬೆಂಗಳೂರಿನಿಂದ ಬಂದವರು ಹೊರಬಾರದಂತೆ ಜಿಲ್ಲಾಧಿಕಾರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಿತ್ಯದ ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಬುಧವಾರ ತಿಳಿಸಿದರು.

ಬೆಂಗಳೂರಿನಿಂದ ಮೈಸೂರಿಗೆ ಸಾವಿರಾರು ಜನರು ಬಂದಿದ್ದಾರೆ ಅವರೆಲ್ಲರೂ ಮನೆಯಿಂದ ಹೊರಬರದೆ ಮನೆಯಲ್ಲಿ ಉಳಿದುಕೊಳ್ಳಬೇಕು. ಕೊರೊನ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಆಸ್ಪತ್ರೆಗೆ ಬರಬೇಕು ಎಂದು ಫೇಸ್‌ಬುಕ್ ಲೈವ್‌ನಲ್ಲಿ ತಿಳಿಸಿದ್ದಾರೆ.

ಅಂಗಡಿಗಳಲ್ಲಿ ದಿನಸಿ ಖರೀದಿ ಮಾಡುವ ವೇಳೆ ಸಾಲಾಗಿ ಬಂದು ಅಗತ್ಯ ವಸ್ತುಗಳನ್ನು  ಖರೀದಿ  ಮಾಡಬೇಕು ಎಂದು ಸೂಚಿಸಿದ್ದಾರೆ‌.

ದೊಡ್ಡ ಮೈದಾನದಲ್ಲಿ ಸಾಲಾಗಿ ಬಂದು ಆಹಾರ ಪದಾರ್ಥಗಳನ್ನು ಖರೀದಿ ಮಾಡಲು ವ್ಯವಸ್ಥೆ ಮಾಡಲಾಗುವುದು ಪ್ರತಿದಿನ ಮನೆಯಿಂದ ಒಬ್ಬರು ಹೊರಬಂದು ದಿನಸಿ ವಸ್ತುಗಳನ್ನು ಖರೀದಿ ಮಾಡಬೇಕು ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತಾ ತಿಳಿಸಿದರು.

ಕೃಷಿ ಮಾರುಕಟ್ಟೆ ಆವರಣದಲ್ಲಿ ಕೆಲಸ ಮಾಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಪಾಸ್ ನೀಡಲಾಗುವುದು ಹಾಗೂ ಹೊರ ರಾಜ್ಯಗಳಿಂದ ಬರುವ ವಾಹನ ಚಾಲಕರ ಮೇಲೆ ನಿಗಾ ಇಡಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್ ತಿಳಿಸಿದರು.

ಈ ಸಂದರ್ಭದಲ್ಲಿ ಕಾನೂ‌ನು ಮತ್ತು ಸುವ್ಯವಸ್ಥೆ ಡಿಸಿಪಿ ಡಾ. ಪ್ರಕಾಶ್ ಗೌಡ ಅವರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು