ಮಂಗಳವಾರ, ಜನವರಿ 18, 2022
27 °C

ಮೈಸೂರು: ಲಸಿಕೆ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಮೈಸೂರು: ಜಿಲ್ಲೆಯಲ್ಲಿ ಇನ್ನೂ 90 ಸಾವಿರ ಮಂದಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ. ಇವರಿಗೆ ಕೋವಿಡ್ ಬರುವ ಸಾಧ್ಯತೆ ಲಸಿಕೆ ಪಡೆದವರಿಗಿಂತ 10 ಪಟ್ಟು ಅಧಿಕ. ಹಾಗಾಗಿ, ತಕ್ಷಣವೇ ಇವರು ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮನವಿ ಮಾಡಿದರು.

ಜಿಲ್ಲೆಯಲ್ಲಿ ಶೇ 96.57 ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಶೇ 82ರಷ್ಟು ಮಂದಿ 2ನೇ ಡೋಸ್ ಲಸಿಕೆ ಪಡೆದಿದ್ದಾರೆ. ಲಸಿಕೆಯನ್ನೇ ಪಡೆಯದವರಿಗೆ ಒಂದು ವೇಳೆ ಕೋವಿಡ್ ಬಂದರೆ ಅವರಿಗೆ ಆಮ್ಲಜನಕದ ಅಗತ್ಯ ಇತರರಿಗಿಂತ 30 ಪಟ್ಟು ಅಧಿಕ ಇದೆ. ನಾವು ಒತ್ತಾಯವಾಗಿ ಲಸಿಕೆ ನೀಡಲು ಸಾಧ್ಯವಿಲ್ಲ. ಹಾಗಾಗಿ, ಎಲ್ಲರೂ ಕೋವಿಡ್ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಭಾನುವಾರ ಒಂದೇ ದಿನ 60 ಮಕ್ಕಳಿಗೆ ಕೋವಿಡ್ ಬಂದಿದೆ. ಸದ್ಯ, ಮಕ್ಕಳಿಗಾಗಿ 831 ಆಮ್ಲಜನಕಯುಕ್ತ ಬೆಡ್‌ಗಳನ್ನು ಸಿದ್ಧವಿರಿಸಿಕೊಳ್ಳಲಾಗಿದೆ. ಖಾಸಗಿ ಶಾಲೆಗಳು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲೋಪ ಕಂಡು ಬಂದರೆ ಅಂತಹ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒಟ್ಟು ಜಿಲ್ಲೆಯಲ್ಲಿ 6,380 ಬೆಡ್‌ಗಳು ಕೋವಿಡ್‌ ರೋಗಿಗಳಿಗಾಗಿ ಮೀಸಲಿರಿಸಲಾಗಿದೆ. ಇವುಗಳನ್ನು ಶೇ 20ರಿಂದ ಶೇ 50ರಷ್ಟು ಹೆಚ್ಚಿಸುವ ಅವಕಾಶವೂ ಇದೆ. ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು