ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಮೋದಿ ಯೋಗ: ರಾಜವಂಶಸ್ಥರಿಗೆ ಜಿಲ್ಲಾಡಳಿತ ಆಹ್ವಾನ

Last Updated 19 ಜೂನ್ 2022, 7:34 IST
ಅಕ್ಷರ ಗಾತ್ರ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಇಲ್ಲಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಜೂನ್‌ 21ರಂದು ನಡೆಯಲಿರುವ ಯೋಗ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಮತ್ತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.

ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್‌ ಸುನಂದಾ ಪಾಲನೇತ್ರ, ‘ಮುಡಾ’ ಅಧ್ಯಕ್ಷ ಎಚ್‌.ವಿ. ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮೊದಲಾದವರು ಆಮಂತ್ರಿಸಿದರು.

ಪ್ರಧಾನಿ ಭಾಗವಹಿಸುವ ಯೋಗ ದಿನದ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ರಾಜವಂಶಸ್ಥರಿಗೆ ಅವಕಾಶ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೇಳಿಬಂದಿತ್ತು. ‘ಪ್ರಧಾನಿಯೊಂದಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗೆ ಮಾತ್ರವೇ ವೇದಿಕೆಯಲ್ಲಿ ಅವಕಾಶ ಇರಲಿದೆ’ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅವರ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ರಾಜವಂಶಸ್ಥರಿಗೆ ಆಮಂತ್ರಣ ನೀಡಿದ್ದಾರೆ. ಯಧುವೀರ್‌ ಪ್ರಧಾನಿಯೊಂದಿಗೆ ಯೋಗಾಸನ ಮಾಡುವ ನಿರೀಕ್ಷೆ ಇದೆ. ಪ್ರಧಾನಿಯು, ಯೋಗ ಕಾರ್ಯಕ್ರಮದ ನಂತರ ರಾಜವಂಶಸ್ಥರ ಆಹ್ವಾನದ ಮೇರೆಗೆ ಅವರ ನಿವಾಸದಲ್ಲಿ ಉಪಾಹಾರ ಸೇವಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT