ಗುರುವಾರ , ನವೆಂಬರ್ 26, 2020
21 °C

ಮೈಸೂರು: ದಸರಾ ಯಶಸ್ಸಿನ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಹರಕೆ ತೀರಿಸಿದ್ದಾರೆ.

‌ನಾಡಿನ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದಿದ್ದಾರೆ.

ರೋಹಿಣಿ ಸಿಂಧೂರಿ ದಸರಾ ಹೊತ್ತಿನಲ್ಲೇ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದರು. ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ ಹರಕೆ ತೀರಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.