ಸೋಮವಾರ, ಸೆಪ್ಟೆಂಬರ್ 26, 2022
24 °C

ಮೈಸೂರು: ಫಲಾನುಭವಿಗಳೊಂದಿಗೆ ರಾಜ್ಯಪಾಲರ ಸಂವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಇಲ್ಲಿನ ಅತಿಥಿ ಗೃಹದಲ್ಲಿ ಗುರುವಾರ ಸಂವಾದ ನಡೆಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ, ನರೇಗಾದಲ್ಲಿ ವಿವಿಧ ಸಹಾಯಧನ ಪಡೆದ ಫಲಾನುಭವಿಗಳು, ಎನ್ಎಚ್‌ಎಂಡಿ ಅನುದಾನ ಪಡೆದ ಫಲಾನುಭವಿಗಳ ಅನಿಸಿಕೆಗಳನ್ನು ಆಲಿಸಿದರು.

‘ಜನ ಕಲ್ಯಾಣಕ್ಕಾಗಿ ಸರ್ಕಾರಗಳ ಜಾರಿಗೊಳಿಸಿರುವ ಯೋಜನೆಗಳನ್ನು ಜನರು ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಇತರರಿಗೂ ಮಾಹಿತಿ ನೀಡಬೇಕು. ಯೋಜನೆಗಳ ಲಾಭದಿಂದ ಯಾವುದೇ ವ್ಯಕ್ತಿಯೂ ವಂಚಿತವಾಗದಂತೆ ನೋಡಿಕೊಳ್ಳಬೇಕು’ ಎಂದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು