ಶನಿವಾರ, ಜೂನ್ 19, 2021
23 °C

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲಾಯಿತು.

ಬನ್ನಿಮಂಟಪದ ಕವಾಯತು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು.

ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ಮೇಯರ್ ತಸ್ನೀಂ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ ಪಾಲ್ಗೊಂಡರು.

ಸಿವಿಲ್ ಪೊಲೀಸ್, ಕೆಎಸ್ ಆರ್ ಪಿ, ಸಿಎಆರ್, ಡಿಎಆರ್, ಮೌಂಟೆಡ್ ಪೊಲೀಸ್, ಅಗ್ನಿಶಾಮಕ ದಳ, ಗೃಹರಕ್ಷಕ ದಳದ ಸಿಬ್ಬಂದಿ ಪಥಸಂಚಲನದಲ್ಲಿ ಪಾಲ್ಗೊಂಡರು.

ಪ್ರತಿವರ್ಷ ಶಾಲಾ ಮಕ್ಕಳಿಂದ ನಡೆಸಿಕೊಡುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಕೋವಿಡ್ ಕಾರಣದಿಂದಾಗಿ ಈ ಬಾರಿ ನಡೆಸಿಲ್ಲ.

ಸಾರ್ವಜನಿಕರು ಕೆಲವೇ ಸಂಖ್ಯೆಯಲ್ಲಿ ಪಾಲ್ಗೊಂಡರು. ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸರು ಭಾಗವಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.