ಮೈಸೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ರೇಸ್ಕೋರ್ಸ್ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಯೋಗಾಸಕ್ತರು ಪಾಲ್ಗೊಂಡರು.

ಬೆಳಿಗ್ಗೆ 7 ರಿಂದ ಯೋಗಾಭ್ಯಾಸ ಕಾರ್ಯಕ್ರಮ ಆರಂಭವಾಯಿತು. ಸುಮಾರು 45 ಎಕರೆ ವಿಸ್ತೀರ್ಣದ ರೇಸ್ ಕೋರ್ಸ್ ಮೈದಾನಕ್ಕೆ ಬೆಳಿಗ್ಗೆ 5.30 ರಿಂದಲೇ ಜನರು ಬರಲಾರಂಭಿಸಿದರು. 6.30ರ ವೇಳೆಗೆ ಮೈದಾನ ಭರ್ತಿಯಾಯಿತು.

ಯೋಗ ಸಂಸ್ಥೆಗಳ ಸದಸ್ಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಾರ್ವಜನಿಕರು ಪಾಲ್ಗೊಂಡರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಡೊಳ್ಳು ಬಾರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಸಿದ್ದರಾಮಯ್ಯ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಗಣ್ಯರು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.