ಸೋಮವಾರ, ಸೆಪ್ಟೆಂಬರ್ 20, 2021
22 °C

ಮೈಸೂರು: ಕೆಪಿಸಿಸಿ ವಿಭಾಗ ಮಟ್ಟದ ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಹೂಟಗಳ್ಳಿಯಲ್ಲಿರುವ ಸೈಲೆಂಟ್ ಶೋರ್ ರೆಸಾರ್ಟ್‌ನಲ್ಲಿ ಶನಿವಾರ ಕೆಪಿಸಿಸಿ ಮೈಸೂರು ವಿಭಾಗ ಮಟ್ಟದ ಸಭೆ ಆರಂಭವಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಚ್.ಮುನಿಯಪ್ಪ, ರಾಜ್ಯ ಸಭಾ ಸದಸ್ಯ ನಾಸಿರ್, ಪಂಜಾಬ್ ರಾಜ್ಯದ ಶಾಸಕ ರವೀಂದ್ರ, ವಿಧಾನಸಭೆಯ ಸಚೇತಕ ಅಜಯಸಿಂಗ್, ವಿಧಾನಪರಿಷತ್ ಸಚೇತಕ ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಸಲೀಂ ಅಹಮ್ಮದ್, ರಾಮಲಿಂಗಾರೆಡ್ಡಿ ವೇದಿಕೆಯಲ್ಲಿದ್ದರು.

ಮುಖಂಡರಾದ ಡಾ.ಎಚ್.ಸಿ.ಮಹದೇವಪ್ಪ, ಗೀತಾ ಮಹದೇವಪ್ರಸಾದ್, ವಾಸು, ಎಂ.ಕೆ.ಸೋಮಶೇಖರ್, ಎ.ಆರ್. ಕೃಷ್ಣಮೂರ್ತಿ, ಎಸ್.ಬಾಲರಾಜು, ಎಸ್.ಜಯಣ್ಣ, ಎ.ಸಿದ್ದರಾಜು, ಕಾಗಲವಾಡಿಶಿವಣ್ಣ, ಎಸ್.ಟಿ.ರವಿಶಂಕರ್, ಕಳಲೆ ಕೇಶವಮೂರ್ತಿ, ಕೆ.ವೆಂಕಟೇಶ್, ಎಂ.ಎಸ್.ಆತ್ಮನಂದ, ಬಿ.ವಿ.ಜಿವಿಜಯ, ಶಾಸಕರಾದ ಎಚ್.ಪಿ.ಮಂಜುನಾಥ್, ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಅನಿಲ್ ಕುಮಾರ್, ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರೀಸ್ವಾಮಿ, ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅರ್.ಮೂರ್ತಿ, ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ, ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಾವಗಲ್ ಮಂಜುನಾಥ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು