ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಮಹಾನಗರ‌ ಪಾಲಿಕೆ ಮೇಯರ್ ಚುನಾವಣೆ ಇಂದು, ಮೂವರು ನಾಮಪತ್ರ ಸಲ್ಲಿಕೆ

Last Updated 25 ಆಗಸ್ಟ್ 2021, 5:00 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್‌ನಿಂದ ಎಚ್.ಎಂ.ಶಾಂತಕುಮಾರಿ, ಜೆಡಿಎಸ್‌ನಿಂದ ಅಶ್ವಿನಿ ಅನಂತು ಹಾಗೂ ಬಿಜೆಪಿಯಿಂದ ಸುನಂದಾ ಪಾಲನೇತ್ರ ಕಣಕ್ಕಿಳಿದಿದ್ದಾರೆ.

ಪಾಲಿಕೆಯಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಡಳಿತ ನಡೆಯುತ್ತಿದೆ. ಮೈತ್ರಿ ಮುಂದುವರಿಯುವ ಬಗ್ಗೆ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್- ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ಆದ್ದರಿಂದ ಚುನಾವಣೆ ಕುತೂಹಲ ಕೆರಳಿಸಿದೆ.

ಪಾಲಿಕೆಯ 64 ಸದಸ್ಯರು, ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರು ಸೇರಿದರೆ ಒಟ್ಟು 72 ಮತಗಳಿವೆ.

ಬಿಜೆಪಿ 25, ಕಾಂಗ್ರೆಸ್‌ 21, ಜೆಡಿಎಸ್‌ 20 ಮತಗಳನ್ನು ಹೊಂದಿವೆ. ಬಿಎಸ್‌ಪಿಯ ಒಬ್ಬರು, ಐವರು ಪಕ್ಷೇತರರು ಇದ್ದಾರೆ.

ಜೆಡಿಎಸ್‌ನಿಂದ ಮೇಯರ್ ಆಗಿದ್ದ ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ರದ್ದಾಗಿರುವ ಕಾರಣಮೇಯರ್‌ ಚುನಾವಣೆ ನಡೆಯುತ್ತಿದೆ.ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಮೊದಲ ಎರಡು ಅವಧಿಗೆ ಕ್ರಮವಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಮೇಯರ್ಸ್ಥಾನ ಪಡೆದುಕೊಂಡಿತ್ತು. ಒಪ್ಪಂದದ ಪ್ರಕಾರ ಮೂರನೇ ಅವಧಿ ಕಾಂಗ್ರೆಸ್‌ಗೆ ಲಭಿಸಬೇಕಿತ್ತು. ಕೊನೆಯ ಕ್ಷಣದಲ್ಲಿ ಆದ ಬೆಳವಣಿಗೆಗಳಿಂದ ಜೆಡಿಎಸ್‌ನ ರುಕ್ಮಿಣಿಮೇಯರ್‌ ಆಗಿದ್ದರು. ಆದರೆ ನಾಲ್ಕು ತಿಂಗಳಲ್ಲೇ ಅವರ ಅಧಿಕಾರ ಕೊನೆಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT