ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ: ಮೇಯರ್ ಆಗಿ ಶಿವಕುಮಾರ್ ಆಯ್ಕೆ

Last Updated 6 ಸೆಪ್ಟೆಂಬರ್ 2022, 7:30 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದ್ದು, ನೂತನ್ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು.

ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ ಏರ್ಪಟ್ಟಿತ್ತು.

ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಹಸರತ್‌ಉಲ್ಲಾ 28 ಮತಗಳನ್ನು ಗಳಿಸಿದರು. ಬಿಜೆಪಿಯ ಶಿವಕುಮಾರ್ 47 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.

ಇಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿಯು ಮೇಯರ್ ಗಾದಿ ಪಡೆದಿದೆ. ಕೊನೆ ಕ್ಷಣದಲ್ಲಿ ಮೈತ್ರಿ ಏರ್ಪಟ್ಟಿದ್ದು, ಜೆಡಿಎಸ್‌ ಈ ಬಾರಿಯೂ ಉಪ ಮೇಯರ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಹೋದ ಬಾರಿ ಜೆಡಿಎಸ್‌ನವರು ಬಿಜೆಪಿಗೆ ಪರೋಕ್ಷ ಸಹಕಾರ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT