ಶುಕ್ರವಾರ, ಡಿಸೆಂಬರ್ 3, 2021
20 °C

Mysuru Dasara: ವಿದ್ಯುತ್ ದೀಪಾಲಂಕಾರ ಒಂಬತ್ತು ದಿನ ವಿಸ್ತರಣೆ- ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು  ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಇಲ್ಲಿ ಘೋಷಿಸಿದರು. 
 
 ಸುತ್ತೂರು ಮಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೊತೆಗೆ ಜನಪ್ರತಿನಿಧಿಗಳು ಮತ್ತು ಸ್ಥಳೀಯರ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರ ವಿಸ್ತರಿಸಲಾಗುತ್ತಿದೆ' ಎಂದು ತಿಳಿಸಿದರು.

ಈ ಮೊದಲು ನಿಗದಿಪಡಿಸಿದಂತೆ ದೀಪಾಲಂಕಾರ ಶುಕ್ರವಾರಕ್ಕೆ (ಅ.15) ಕೊನೆಗೊಳ್ಳಬೇಕಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು