ಬುಧವಾರ, ಮೇ 27, 2020
27 °C

ಪಿಎಸ್ಐ ಅವರಿಂದ ಅವಾಚ್ಯ ಶಬ್ದಗಳ ಬಳಕೆ: ವಿಡಿಯೊ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಂಜನಗೂಡಿನ ಸಬ್ ಇನ್ ಸ್ಪೆಕ್ಟರ್ ಯಾಸ್ಮಿನ್ ತಾಜ್ ಅವರು ಪೆಟ್ರೋಲ್ ಬಂಕ್ ಒಂದರಲ್ಲಿ ಅವಾಚ್ಯ ಶಬ್ದ ಗಳನ್ನು ಬಳಸಿ, ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿದ ವಿಡಿಯೊವೊಂದು ಮಂಗಳವಾರ ವಾಟ್ಸ್ ಆ್ಯಪ್‌ನಲ್ಲಿ ಸಾಕಷ್ಟು ಹರಿದಾಡುತ್ತಿದೆ.

ಡಿಸೇಲ್ ಇಲ್ಲ ಎಂದ ಪೆಟ್ರೋಲ್ ಬಂಕ್ ಸಿಬ್ಬಂದಿ ವಿರುದ್ದ ಹರಿಹಾಯ್ದಿರುವ ಅವರು ಪೆಟ್ರೋಲ್ ಬಂಕ್ ಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುವ ದೃಶ್ಯಗಳು ವಿಡಿಯೊದಲ್ಲಿವೆ.

ಇವರು ಬಳಸಿದ ಪದಗಳು ಹಾಗೂ ವರ್ತನೆಗೆ ಸಾಕಷ್ಟು ವಿರೋಧ ಕೇಳಿ ಬಂದಿದೆ‌.

ಕೆಲ‌ದಿನಗಳ ಹಿಂದೆಯಷ್ಟೆ ಬೆಂಗಳೂರಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ರೈಲು ನಿಲ್ದಾಣದಲ್ಲಿ ದೌರ್ಜನ್ಯ ನಡೆಸಿದ ಆರೋಪ ಇವರ ವಿರುದ್ದ ಕೇಳಿ ಬಂದಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು