ಮೈಸೂರು: ತಾಲ್ಲೂಕಿನಲ್ಲಿ ನಡೆದಿರುವ ಭೂ ಹಗರಣಗಳ ಕುರಿತು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೊರಡಿಸಿದ್ದ ಅದೇಶಗಳಿಗೆ ಮರು ಜೀವ ಲಭಿಸಿದೆ.
ಮೈಸೂರು ತಾಲ್ಲೂಕು ಜಯಪುರ ಹೋಬಳಿ, ಕಸಬಾ ಹೋಬಳಿ, ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮದ ಕೆಲವು ಸ್ಥಳಗಳನ್ನು ಮರು ಸರ್ವೆ ಮಾಡುವಂತೆ ಭೂದಾಖಲೆಗಳ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಪರಿಶೀಲನೆ ಕಾರ್ಯಕ್ಕೆ ಮೈಸೂರು ಜಿಲ್ಲೆಯ ಅಧಿಕಾರಿಗಳನ್ನು ಹೊರಗಿಟ್ಟು ತಂಡ ರಚಿಸಲಾಗಿದೆ.
ಮಂಡ್ಯ ಜಿಲ್ಲೆ ಭೂ ದಾಖಲೆಗಳ ಉಪನಿರ್ದೇಶಕ ಬಿ.ಜಿ.ಉಮೇಶ್, ತುಮಕೂರಿನ ಸುಜಯ್ ಕುಮಾರ್, ದಾವಣಗೆರೆಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಟಿ.ಕೆ.ಲೋಹಿತ್ ತಂಡದಲ್ಲಿದ್ದಾರೆ. ಆ.31 ರಂದು ಆದೇಶ ಹೊರಡಿಸಿದ್ದು, 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
*
‘ಮನೀಷ್ ಮೌದ್ಗಿಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಸರ್ವೇ ಇಲಾಖೆ ಆಯುಕ್ತರಾದ ಕೂಡಲೇ ಅವರು ಈ ರಾಜ್ಯಕ್ಕೆ ಸುಪ್ರೀಂ ಆದರೇ?
-ಸಾ.ರಾ.ಮಹೇಶ್, ಶಾಸಕ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.