ಮೈಸೂರು: ನಂಜನಗೂಡು ತಾಲ್ಲೂಕಿನ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವವು ಗುರುವಾರ ವಿಜೃಂಭಣೆಯಿಂದ ನಡೆಯಿತು.
ಡೊಳ್ಳು ಕುಣಿತ, ಪೂಜಾ ಕುಣಿತ, ನಂದೀಧ್ವಜ, ಕಂಸಾಳೆ ಸೇರಿದಂತೆ ಹಲವು ಕಲಾತಂಡಗಳು ರಥೋತ್ಸವದ ಮೆರುಗು ಹೆಚ್ಚಿಸಿದವು.
ಸುತ್ತಮುತ್ತಲ ಗ್ರಾಮಗಳ ಜನರು ತಂಡೋಪತಂಡವಾಗಿ ಬಂದು ದೂಪ ಹಾಕಿ ಕೈಮುಗಿದರು. ಹಣ್ಣು ಧವನವನ್ನು ತೇರಿಗೆ ಎಸೆಯುವ ಮೂಲಕ ಹರಕೆ ತೀರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.