ಗುರುವಾರ , ಮೇ 13, 2021
18 °C

ಏ.23ರಿಂದ ಮೈಸೂರಿನ ಚಿತ್ರಮಂದಿರಗಳು ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಏ.23ರಿಂದ ಮೈಸೂರಿನ ಚಿತ್ರಮಂದಿರಗಳನ್ನು (ಸಿಂಗಲ್‌ ಸ್ಕ್ರೀನ್‌) ಬಂದ್‌ ಮಾಡಲು, ಚಿತ್ರಮಂದಿರಗಳ ಮಾಲೀಕರು ನಿರ್ಧರಿಸಿದ್ದಾರೆ.

‘ಮೈಸೂರು ನಗರದ ಎಲ್ಲಾ 11 ಥಿಯೇಟರ್‌ಗಳನ್ನು ಬಂದ್‌ ಮಾಡಲಾಗುತ್ತಿದೆ. ಕೆ.ಆರ್‌.ನಗರ, ನಂಜನಗೂಡು ನಗರದ ಥಿಯೇಟರ್‌ಗಳ ಮಾಲೀಕರು ಕೂಡ ಬಂದ್‌ ಮಾಡಲು ಮುಂದಾಗಿದ್ದಾರೆ’ ಎಂದು ಮೈಸೂರು ನಗರ ಚಲನಚಿತ್ರ ಪ್ರದರ್ಶಕರ ಸಂಘದ ಕಾರ್ಯದರ್ಶಿ ಹಾಗೂ ಗಾಯತ್ರಿ ಚಿತ್ರಮಂದಿರದ ಮಾಲೀಕ ಎಂ.ಆರ್‌.ರಾಜರಾಂ ತಿಳಿಸಿದರು.

‘ಈಗಾಗಲೇ ಭಾರಿ ನಷ್ಟ ಅನುಭವಿಸಿದ್ದೇವೆ. ಆದಾಗ್ಯೂ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂಪ‍್ರೇರಣೆಯಿಂದ ಸಿನಿಮಾ ಥಿಯೇಟರ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದ್ದೇವೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು