ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲಾ ಪಂಚಾಯಿತಿಗೆ ಮಹಿಳಾ ಸಾರಥ್ಯ

ಅಧ್ಯಕ್ಷರಾಗಿ ಪರಿಮಳಾ ಶ್ಯಾಂ, ಉಪಾಧ್ಯಕ್ಷರಾಗಿ ಗೌರಮ್ಮ ಆಯ್ಕೆ
Last Updated 23 ಫೆಬ್ರುವರಿ 2019, 8:41 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ನ ಪರಿಮಳಾ ಶ್ಯಾಂ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಗೌರಮ್ಮ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಾಗಿ ಇವರಿಬ್ಬರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಗುರುಸ್ವಾಮಿ ನಾಮಪತ್ರ ಸಲ್ಲಿಸಿದ್ದರೂ, ಬಳಿಕ ವಾಪಸ್ ತೆಗೆದುಕೊಂಡರು.

ಬಿಜೆಪಿಗೆ ದ್ರೋಹ ಬಗೆದ ಜೆಡಿಎಸ್ ಗೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಬಿಜೆಪಿ ಸದಸ್ಯರು ಚುನಾವಣೆ ಬಹಿಷ್ಕರಿಸಿ ಹೊರನಡೆದರು.

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಜತೆಗಿನ ಮೂರು ವರ್ಷಗಳ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಜತೆ ಅಧಿಕಾರ ಹಂಚಿಕೊಳ್ಳಲು ಜೆಡಿಎಸ್ ತೀರ್ಮಾನಿಸಿತ್ತು.

49 ಸದಸ್ಯ ಬಲದ ಜಿ.ಪಂ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟು 40 ಸದಸ್ಯರನ್ನು ಹೊಂದಿವೆ. ಬಿಜೆಪಿ 8 ಸ್ಥಾನ ಹೊಂದಿದ್ದು, ಒಬ್ಬರು ಪಕ್ಷೇತರ ಸದಸ್ಯ ಇದ್ದಾರೆ.

ಸಚಿವರಾದ ಸಾ.ರಾ.ಮಹೇಶ್ ಮತ್ತು ಜಿ.ಟಿ.ದೇವೇಗೌಡ ಒಳಗೊಂಡಂತೆ ಜೆಡಿಎಸ್ ನ ಸ್ಥಳೀಯ ಮುಖಂಡರಿಗೆ ಕಾಂಗ್ರೆಸ್ ಜತೆ ಕೈಜೋಡಿಸಲು ಇಷ್ಟವಿರಲಿಲ್ಲ. ಬಿಜೆಪಿ ಜತೆ ಐದು ವರ್ಷ ಮೈತ್ರಿ ಮುಂದುವರಿಯಲಿದೆ ಎಂದು ಹೇಳುತ್ತಲೇ ಇದ್ದರು.

ಆದರೆ ಶುಕ್ರವಾರ ರಾತ್ರಿ ದಿಢೀರ್ ಬೆಳವಣಿಗೆ ನಡೆದು, ಬಿಜೆಪಿ ಜತೆಗಿನ ಮೈತ್ರಿ ಮುರಿದು ಕಾಂಗ್ರೆಸ್ ಜತೆ ಕೈಜೋಡಿಸಲು ಜೆಡಿಎಸ್ ತೀರ್ಮಾನಿಸಿತ್ತು.

ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಥಳೀಯ ಮುಖಂಡರಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT