ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರ: ಮುಗಿದ ಅಸಿಂಧು ಮತ ಬೇರ್ಪಡೆ ಪ್ರಕ್ರಿಯೆ

Last Updated 14 ಡಿಸೆಂಬರ್ 2021, 9:03 IST
ಅಕ್ಷರ ಗಾತ್ರ

ಮೈಸೂರು: ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಅಸಿಂಧು ಮತಗಳನ್ನು ಬದಿಗಿರಿಸುವ ಪ್ರಕ್ರಿಯೆ ಮುಗಿದಿದ್ದು, ಕೆಲವೇ ನಿಮಿಷಗಳಲ್ಲಿ ಮತ ಎಣಿಕೆ ಅಧಿಕೃತವಾಗಿ ಆರಂಭವಾಗಲಿದೆ.

ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 500 ಮತಗಳು ತಿರಸ್ಕೃತಗೊಂಡಿವೆ. ಅಸಿಂಧು ಮತಗಳನ್ನು ಬೇರ್ಪಡಿಸುವ ವೇಳೆ ಕಾಂಗ್ರೆಸ್‌ಗೆ ಮೊದಲ ಪ್ರಾಶಸ್ತ್ಯ ಮತಗಳು ಹೆಚ್ಚು ಇರುವುದು ಗೊತ್ತಾಗಿದೆ. ನಂತರ ಸ್ಥಾನದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷ ಇವೆ.

ಕಾಂಗ್ರೆಸ್‌ ಪಕ್ಷದ ಡಾ.ಡಿ.ತಿಮ್ಮಯ್ಯ, ಬಿಜೆಪಿಯ ಆರ್‌.ರಘು (ಕೌಟಿಲ್ಯ), ಜೆಡಿಎಸ್‌ ಪಕ್ಷದ ಸಿ.ಎನ್‌.ಮಂಜೇಗೌಡ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮೂವರೂ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕನ್ನಡ ಚಳವಳಿ ‍ಪಕ್ಷದ ವಾಟಾಳ್‌ ನಾಗರಾಜ್‌ ಸೇರಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಅಸಿಂಧು ಮತಗಳನ್ನು ಬೇರ್ಪಡಿಸುವ ವೇಳೆ ಕಾಂಗ್ರೆಸ್‌ಗೆ ಮೊದಲ ಪ್ರಾಶಸ್ತ್ಯ ಮತಗಳು ಹೆಚ್ಚು ಇರುವುದು ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದರು. ಆದರೆ, ಮತ ಎಣಿಕೆ ಇನ್ನೂ ಅಧಿಕೃತವಾಗಿ ಆರಂಭವಾಗಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT