ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾ: ಜಂಬೂಸವಾರಿಗೆ ಕ್ಷಣಗಣನೆ

ಬಿಕೋ ಎನ್ನುತ್ತಿರುವ ಮೈಸೂರಿನ ರಸ್ತೆಗಳು
Last Updated 26 ಅಕ್ಟೋಬರ್ 2020, 9:34 IST
ಅಕ್ಷರ ಗಾತ್ರ

ಮೈಸೂರು: ಕೋವಿಡ್‌ ಕಾರಣ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಗರಕ್ಕೆ ಬಂದಿದ್ದು, ಮೊದಲು ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

3.40ರಿಂದ 4.15ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸರಳ ಹಾಗೂ ಸಾಂಪ್ರದಾಯಿಕವಾಗಿ ಮೆರವಣಿಗೆ ನಡೆಯಲಿದ್ದು, ಐದು ಕಲಾ ತಂಡಗಳು ಹಾಗೂ ಎರಡು ಸ್ತಬ್ಧಚಿತ್ರಗಳು ಮಾತ್ರ ಭಾಗಿಯಾಗಲಿವೆ.

ಪ್ರತಿ ಮೆರವಣಿಗೆ ಸಮಯದಲ್ಲಿ 30 ಸಾವಿರಕ್ಕೂ ಮಂದಿ ಮಂದಿ ಸೇರುತ್ತಿದ್ದ ಅರಮನೆ ಆವರಣದಲ್ಲಿ ಈ ಬಾರಿ ತೀರಾ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದಾರೆ. 300 ಮಂದಿಗೆ ಮಾತ್ರ ಪ್ರವೇಶಾವಕಾಶ ಎಂದು ನಿಗದಿಯಾಗಿದ್ದರೂ ಅದಕ್ಕಿಂತ ಹೆಚ್ಚು ಇರುವಂತೆ ಕಂಡುಬರುತ್ತಿದೆ. ಇವರಲ್ಲಿ ಕಲಾವಿದರು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು, ಪೊಲೀಸರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಅರಮನೆ ಸುತ್ತ ನಗರ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದಾರೆ. ರಸ್ತೆಗಳು, ವೃತ್ತಗಳು, ಸುತ್ತಮುತ್ತ ವಾಹನಗಳ ಓಡಾಟದ ಮೇಲೂ ನಿರ್ಬಂಧ ಹೇರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT