ಗುರುವಾರ , ನವೆಂಬರ್ 26, 2020
21 °C

ಮೈಸೂರು ದಸರಾ: ಮುಖ್ಯಮಂತ್ರಿ ಯಡಿಯೂರಪ್ಪ ಪುಷ್ಪಾರ್ಚನೆ, ಮೆರವಣಿಗೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Mysuru dasara 2020

ಮೈಸೂರು: ಅಭಿಮನ್ಯು ಆನೆ ಹೊತ್ತಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಧ್ಯಾಹ್ನ 3.54ಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಗೌರವ ವಂದನೆ ಸಲ್ಲಿಸುತ್ತಿದ್ದಂತೆ 21 ಸುತ್ತು ಕುಶಾಲತೋಪು ಸಿಡಿಸಲಾಯಿತು. ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿದರೆ, ಆವರಣದಲ್ಲಿ ಸೇರಿದ್ದ ಬೆರಳೆಣಿಕೆ ಮಂದಿ ತಲೆಬಾಗಿ ನಮಿಸಿ ನಾಡದೇವತೆಗೆ ನಮಿಸಿದರು.

ಮೊದಲ ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಜೊತೆ ಕಾವೇರಿ, ವಿಜಯಾ, ವಿಕ್ರಂ ಹಾಗೂ ಗೋಪಿ ರಾಜಗಾಂಭೀರ್ಯದಿಂದ ಜಂಬೂಸವಾರಿಯಲ್ಲಿ ಹೆಜ್ಜೆ ಇಟ್ಟವು. ಕೇವಲ ಐದು ಕಲಾ ತಂಡಗಳು, ಎರಡು ಸ್ತಬ್ಧಚಿತ್ರಗಳು, ಹಿಂದೆ ಪೊಲೀಸ್‌ ಬ್ಯಾಂಡ್‌ ಹಾಗೂ ಅಶ್ವಾರೋಹಿ ಪಡೆ ಸಾಗಿದವು.

ನೋಡಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು