ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ಸಂಬಂಧಿಸಿ ಜುಲೈ ಮೊದಲ ವಾರ ಉನ್ನತಮಟ್ಟದ ಸಭೆ: ಸಚಿವ ಎಸ್.ಟಿ. ಸೋಮಶೇಖರ್‌

Last Updated 27 ಜೂನ್ 2022, 14:40 IST
ಅಕ್ಷರ ಗಾತ್ರ

ಮೈಸೂರು: ‘ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆಯನ್ನು ಜುಲೈ ಮೊದಲ ವಾರ ನಡೆಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ ತಿಳಿಸಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚರ್ಚಿಸಲಾಗುವುದು’ ಎಂದರು.

ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಟಿ. ದೇವೇಗೌಡ, ‘ಮಲೆ ಮಹದೇಶ್ವರ ಬೆಟ್ಟಕ್ಕಿರುವಂತೆ ಚಾಮುಂಡಿ ಬೆಟ್ಟಕ್ಕೊಂದು ಪ್ರಾಧಿಕಾರ ರಚಿಸಬೇಕು. ದಸರಾ ಪ್ರಾಧಿಕಾರವನ್ನೂ ಮಾಡಬೇಕು’ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ದಸರಾ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರೋಣ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT