ಮೈಸೂರು: ಕೋವಿಡ್–19 ಕಾರಣ ಸತತ ಎರಡನೇ ವರ್ಷವೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ದಸರಾ ಮಹೋತ್ಸವದ ಜಂಬೂಸವಾರಿ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ.

ಆನೆಗಳು ಅರಮನೆ ಮುಂಭಾಗಕ್ಕೆ ಬಂದು ನಿಂತಿವೆ. ಸ್ತಬ್ಧಚಿತ್ರವೂ ಸಿದ್ಧವಾಗಿವೆ.

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರಕ್ಕೆ ಬಂದಿದ್ದು, ಮೊದಲು ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ.

ಸಂಜೆ 4.36ಕ್ಕೆ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ವಿಜಯದಶಮಿ ಮೆರವಣಿಗೆ ಚಾಲನೆ ನೀಡಲಿದ್ದಾರೆ. ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಸರಳ ಹಾಗೂ ಸಾಂಪ್ರದಾಯಿಕವಾಗಿ ಮೆರವಣಿಗೆ ನಡೆಯಲಿದ್ದು, 12 ಕಲಾ ತಂಡಗಳು ಹಾಗೂ ಆರು ಸ್ತಬ್ಧಚಿತ್ರಗಳು ಮಾತ್ರ ಭಾಗಿಯಾಗಲಿವೆ.

500 ಮಂದಿಗೆ ಮಾತ್ರ ಪ್ರವೇಶಾವಕಾಶ ಎಂದು ನಿಗದಿಯಾಗಿದ್ದರೂ ಅದಕ್ಕಿಂತ ಹೆಚ್ಚು ಜನರು ಅರಮನೆ ಆವರಣದಲ್ಲಿ ಸೇರಿದ್ದಾರೆ. ಕಲಾವಿದರು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಪೊಲೀಸರೇ ಅಧಿಕ ಸಂಖ್ಯೆಯಲ್ಲಿದ್ದಾರೆ.

ಅರಮನೆ ಸುತ್ತ ಅಲ್ಲಲ್ಲಿ ಜನ ಸೇರಿದ್ದಾರೆ. ಜಂಬೂಸವಾರಿ ವೀಕ್ಷಣೆಗಾಗಿ ಅರಮನೆ ಆವರಣದೊಳಗೆ ಬರಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಚದುರಿಸಿದ ಪೊಲೀಸರು ಎಚ್ಚರಿಕೆ ನೀಡಿದರು. ಸುತ್ತಮುತ್ತ ವಾಹನಗಳ ಸಂಚಾರದ ಮೇಲೂ ನಿರ್ಬಂಧ ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.