ಬುಧವಾರ, ಜೂನ್ 29, 2022
23 °C
ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ರೋಹಿಣಿ ಸಿಂಧೂರಿ ಆದೇಶ ಬದಲಾಯಿಸಿದ ಮೈಸೂರು ನೂತನ ಜಿಲ್ಲಾಧಿಕಾರಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವಾರದಲ್ಲಿ ಮೂರು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶ ಬದಲಾಯಿಸಿರುವ ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ವಾರದ ಏಳೂ ದಿನ ಬೆಳಿಗ್ಗೆ  6ರಿಂದ ಬೆಳಿಗ್ಗೆ 10 ಗಂಟೆವರೆಗೆ ಅವಕಾಶ ಕಲ್ಪಿಸಿದ್ದಾರೆ.

‘ಜೂನ್ 5ರಂದು ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ. ಸರ್ಕಾರದ ಹಿಂದಿನ ಮಾರ್ಗಸೂಚಿ ಪ್ರಕಾರ ಪ್ರತಿ ದಿನ ಬೆಳಿಗ್ಗೆ  6ರಿಂದ ಬೆಳಿಗ್ಗೆ 10 ಗಂಟೆ ವರೆಗೆ ಚಟುವಟಿಕೆಗಳಿಗೆ ಅವಕಾಶವಿರಲಿದೆ’ ಎಂದು ಸೋಮವಾರ ಪ್ರಕಟಣೆ ಹೊರಡಿಸಿದ್ದಾರೆ. 

ಜೂನ್‌ 5ರಂದು ರಾತ್ರಿ ಸಿಂಧೂರಿ ಅವರು ತಮ್ಮ ವರ್ಗಾವಣೆ ಆದೇಶ ಹೊರಬೀಳುವ ಸಮಯದಲ್ಲಿ ಜಿಲ್ಲೆಯಲ್ಲಿ ಲಾಕ್‌ಡೌನ್‌ ನಿಯಮದಲ್ಲಿ ಕೆಲ ಬದಲಾವಣೆ ಮಾಡಿದ್ದರು.

‘ಜೂನ್ 7ರಿಂದ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಮಾತ್ರ ಖರೀದಿಗೆ ಅವಕಾಶ ನೀಡಲಾಗುತ್ತದೆ. ಈ ಆದೇಶ ಜೂನ್‌ 14ರ ಬೆಳಿಗ್ಗೆ 6 ಗಂಟೆವರೆಗೆ ಜಾರಿಯಲ್ಲಿರಲಿದೆ’ ಎಂದು ಪ್ರಕಟಣೆ ಹೊರಡಿಸಿದ್ದರು. ಅದೀಗ ಬದಲಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು