ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕಾ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ಚಾಲನೆ

Last Updated 17 ನವೆಂಬರ್ 2021, 7:23 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಬುಧವಾರ ಆರಂಭವಾದ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಗಳ 12ನೇ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವಕ್ಕೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಭಾರತದಂತಹ ವೈವಿಧ್ಯಮಯ ದೇಶಕ್ಕೆ ಇಂತಹ ಸಮೂಹ ಚಟುವಟಿಕೆಗಳು ಬೇಕು. ಮನುಷ್ಯ ಮನುಷ್ಯ ನಡುವೆ ಗೋಡೆ ಕಟ್ಟುವ ವಿಚ್ಛಿದ್ರಕಾರಕ ಶಕ್ತಿಗಳ ನಡುವೆ ರಚನಾತ್ಮಕವಾಗಿ ಕಟ್ಟುವುದಕ್ಕೆ ಇಂತಹ ಯುವ ಜನೋತ್ಸವಗಳ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.
ಇದಕ್ಕೂ ಮುನ್ನ ಕುವೆಂಪು ಪ್ರತಿಮೆಯಿಂದ ಘಟಿಕೋತ್ಸವ ಭವನದವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.

ನ.19ರವರೆಗೂ ಇಲ್ಲಿ ವಿವಿಧ ಸ್ಪರ್ಧೆಗಳು ಆಯೋಜನೆಗೊಂಡಿವೆ. ರಾಜ್ಯದ ಎಲ್ಲ ತೋಟಗಾರಿಕಾ ಮಹಾವಿದ್ಯಾಲಯಗಳ ಸುಮಾರು 200ಕ್ಕೂ ವಿದ್ಯಾರ್ಥಿಗಳು ಇಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT