ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಮಹಾನಗರಪಾಲಿಕೆ| ಸೆ.6ರಂದು ಮೇಯರ್, ಉಪಮೇಯರ್‌ ಚುನಾವಣೆ

Last Updated 25 ಆಗಸ್ಟ್ 2022, 14:23 IST
ಅಕ್ಷರ ಗಾತ್ರ

ಮೈಸೂರು: ಮಹಾನಗರಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗಾಗಿ ಸೆ.6ರಂದು ಮಧ್ಯಾಹ್ನ 12ಕ್ಕೆ ಚುನಾವಣೆ ನಿಗದಿಪಡಿಸಲಾಗಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಪ್ರಕ್ರಿಯೆಯೂ ಅಂದು ಜರುಗಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ‘ಎ’ ಮಹಿಳೆಗೆ ಮೀಸಲು ನಿಗದಿಪಡಿಸಿ ಆದೇಶ ಹೊರಬಿದ್ದ ಮರುದಿನವೇ ಚುನಾವಣೆಗೆ ಮುಹೂರ್ತ ನಿಗದಿಪಡಿಸಲಾಗಿದೆ. ಇದರೊಂದಿಗೆ, ರಾಜಕೀಯ ಪಕ್ಷಗಳ ಮಟ್ಟದಲ್ಲಿ ಚಟುವಟಿಕೆಗಳು ಕೂಡ ಗರಿಗೆದರಿವೆ. ಸೆ.6ರಂದು ಪ್ರಕ್ರಿಯೆ ನಡೆಯುವುದರೊಂದಿಗೆ, ನಾಡಹಬ್ಬ ದಸರೆಗೆ ಹೊಸ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT