ಗುರುವಾರ , ಸೆಪ್ಟೆಂಬರ್ 23, 2021
24 °C
ಪ್ರಶಿಕ್ಷಣಾರ್ಥಿಗಳಿಂದ ಹಣ ವಸೂಲು ಆರೋಪ

ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಪ್ರಶಿಕ್ಷಣಾರ್ಥಿಗಳಿಂದ ಹಣ ವಸೂಲು ಮಾಡಿದ ಆರೋಪದ ಮೇರೆಗೆ ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಸುಬ್ರಹ್ಮಣ್ಯ ಅವರನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ 8 ತುಕಡಿಯ ಪ್ರಶಿಕ್ಷಣಾರ್ಥಿಗಳಲ್ಲಿ ತುಕಡಿಯಿಂದ ಒಬ್ಬರು ಅಥವಾ ಇಬ್ಬರು ಪ್ರಶಿಕ್ಷಣಾರ್ಥಿಗಳ ಮೂಲಕ ಉಳಿದ ಪ್ರಶಿಕ್ಷಣಾರ್ಥಿಗಳಿಂದ ತಲಾ ₹ 2,500ನ್ನು ಗೂಗಲ್‌ಪೇ, ಫೋನ್‌ಪೇ ಮೂಲಕ ತುಕಡಿಯ ಒಬ್ಬರ ಬ್ಯಾಂಕ್ ಖಾತೆಗೆ ಒಟ್ಟು ₹ 5.90 ಲಕ್ಷ ಹಣ ಸಂದಾಯ ಮಾಡಿಸಿಕೊಂಡಿರುವ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು