ಮೈಸೂರು: ಎಸ್‌ಪಿ, ಡಿಸಿಪಿ ಅಧಿಕಾರ ಸ್ವೀಕಾರ

ಮೈಸೂರು: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು.
2010ರ ಐಪಿಎಸ್ ಶ್ರೇಣಿಯ ಅಧಿಕಾರಿಯಾದ ಆರ್.ಚೇತನ್ ಅವರು ಈ ಹಿಂದೆ ದಾವಣಗೆರೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆ ಹಾಗೂ ಉಡುಪಿ ಕರಾವಳಿ ಕಾವಲು ಪೊಲೀಸ್ ಪಡೆಯ ಎಸ್.ಪಿಯಾಗಿ ಕಾರ್ಯನಿರ್ವಹಿಸಿದ್ದರು.
ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಪ್ರದೀಪ್‌ಗುಂಟಿ ಅವರು ನಿರ್ಗಮಿತ ಅಧಿಕಾರಿ ಡಾ.ಎ.ಎನ್.ಪ್ರಕಾಶ್‌ಗೌಡ ಅವರಿಂದ ಅಧಿಕಾರ ಸ್ವೀಕರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.