ಶನಿವಾರ, ಜೂನ್ 25, 2022
24 °C

ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ನೇತೃತ್ವದಲ್ಲಿ ಮಾನಸಗಂಗೋತ್ರಿಯಲ್ಲಿ ಸೇರಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.

ಈಚೆಗೆ ಸುರಿದ ಭಾರಿ ಮಳೆಯಿಂದ ಬಹುತೇಕ ವಿದ್ಯಾರ್ಥಿನಿಲಯಗಳು ಸೋರುತ್ತಿವೆ. ಶುದ್ಧ ಕುಡಿಯುವ ನೀರಿನ ಸೌಲಭ್ಯದ ಕೊರತೆಯಿಂದ ವಿದ್ಯಾರ್ಥಿಗಳು ಬಳಲುವಂತಾಗಿದೆ ಎಂದು ದೂರಿದರು.

ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆಯೂ ಇಲ್ಲದಂತಾಗಿದೆ. ಕಟ್ಟಡಗಳ ದುರಸ್ತಿ ಕಾರ್ಯ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಅಧ್ಯಕ್ಷ ನಟರಾಜ್ ಶಿವಣ್ಣ, ಗೌರವಾಧ್ಯಕ್ಷ ಸೋಸಲೆ ಮಹೇಶ್, ಕಾರ್ಯದರ್ಶಿ ಜೆ.ಶಿವಮೂರ್ತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು