ಬುಧವಾರ, ಜನವರಿ 26, 2022
23 °C

ಯುವರಾಜ ಕಾಲೇಜು: ತರಗತಿಗಳನ್ನು ಆರಂಭಿಸಲು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಯುವರಾಜ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿಗಳು ತರಗತಿಗಳನ್ನು ಆರಂಭಿಸಲು ಒತ್ತಾಯಿಸಿ ಕ್ರಾಫರ್ಡ್ ಭವನದ ಮುಂಭಾಗ ಬುಧವಾರ ಧರಣಿ ನಡೆಸಿದರು.

ಜೈವಿಕ ತಂತ್ರಜ್ಞಾನ, ಸೂಕ್ಷ್ಮ ಜೀವಶಾಸ್ತ್ರ, ಎಂಬಿಎ ವಿಷಯಗಳಿಗೆ ಪಾಠ ಮಾಡಲು ಉಪನ್ಯಾಸಕರೇ ಇಲ್ಲ. ಇದ್ದ ಅತಿಥಿ ಉಪನ್ಯಾಸಕರನ್ನು ತೆಗೆದು ಹಾಕಲಾಗಿದೆ. ಫೆಬ್ರುವರಿ ಹೊತ್ತಿಗೆ ಪರೀಕ್ಷೆಗಳು ಎದುರಾಗಲಿವೆ. ಹೀಗಿದ್ದರೂ ಮೈಸೂರು ವಿಶ್ವವಿದ್ಯಾನಿಲಯ ಸುಮ್ಮನಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಎಲ್ಲ ವಿಷಯಕ್ಕೂ ನಿಗದಿತ ಸಂಖ್ಯೆಯಷ್ಟು ಉಪನ್ಯಾಸಕರನ್ನು ನೇಮಕ ಮಾಡಬೇಕು. ತರಗತಿಗಳು ನಿತ್ಯ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಂಗಳವಾರವೂ ವಿದ್ಯಾರ್ಥಿಗಳು ಯುವರಾಜ ಕಾಲೇಜಿನ ಮುಂದೆ ಧರಣಿ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು