ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡಿನಲ್ಲಿ ಮಾ. 29ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Last Updated 15 ಫೆಬ್ರುವರಿ 2020, 12:50 IST
ಅಕ್ಷರ ಗಾತ್ರ

ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಲಾಮಂದಿರದಲ್ಲಿ ಮಾ. 29ರಿಂದ 2 ದಿನಗಳ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.

ಫೆ. 17ರಂದು ನಡೆಯಲಿರುವ ಜಿಲ್ಲಾ ಸಮಿತಿಯ ಕಾರ್ಯಕಾರಿಣಿಯಲ್ಲಿ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾ ಗುವುದು. ತಾಲ್ಲೂಕು ಆಡಳಿತ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಹಕಾರದೊಂದಿಗೆ ಸಮ್ಮೇಳನ ನಡೆಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ, ಹಮ್ಮಿಕೊಂಡಿರುವುದಾಗಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮಹೇಶ್ ಅತ್ತಿಖಾನೆ ಮಾತನಾಡಿ, ಸಮ್ಮೇಳನದಲ್ಲಿ ಸುಮಾರು 3 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಶ್ರೀಕಂಠೇಶ್ವರಸ್ವಾಮಿ ಕಲಾಮಂದಿರವನ್ನು ಮುಖ್ಯ ವೇದಿಕೆ ಮಾಡಿಕೊಂಡು ಗೋಷ್ಠಿಗಳಿಗೆ ಪ್ರತ್ಯೇಕ ವೇದಿಕೆ ಕಲ್ಪಿಸಲಾಗುವುದು. ಇನ್ನು ದಾಸೋಹ ಭವನದಲ್ಲಿ ಊಟೋಪಚಾರ ವ್ಯವಸ್ಥೆ ಮಾಡಲು ಈಗಾಗಲೇ ದೇವಾಲಯದ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

ಕಸಾಪ ತಾಲ್ಲೂಕು ಕಾರ್ಯದರ್ಶಿ ಎನ್.ಸಿ.ಬಸವಣ್ಣ, ಖಜಾಂಚಿ ಎಂ.ಎನ್.ಸತೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT