ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜ್ಜನ ಮನೆಯಿಂದ ನಾಟಕೋತ್ಸವ 25ಕ್ಕೆ

Last Updated 21 ಡಿಸೆಂಬರ್ 2019, 9:52 IST
ಅಕ್ಷರ ಗಾತ್ರ

ಮೈಸೂರು: ‘ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಬೆಳಕಿಗೆ ತರುವ ಅಜ್ಜನ ಮನೆ ಕಲಾ ಪ್ರಪಂಚ ಸಂಸ್ಥೆ, ಈ ಬಾರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ರಂಗಕಲೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ನಾಟಕೋತ್ಸವ ಆಯೋಜಿಸಿದೆ’ ಎಂದು ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಕೃಷ್ಣ ತಿಳಿಸಿದರು.

‘ಡಿ.25ರ ಬುಧವಾರ ಬೆಳಗ್ಗೆ 9ರಿಂದ ಸಂಜೆ 5ರ ತನಕ ನಗರದ ಕಲಾ ಮಂದಿರದಲ್ಲಿ ನಾಲ್ಕು ನಾಟಕ ಪ್ರದರ್ಶನ ಹಾಗೂ ಅಂಗವಿಕಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ’ ಎಂದು ಶುಕ್ರವಾರ ನಡೆದ ‍ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಂಗರಾವ್ ಸ್ಮಾರಕ ಅಂಗವಿಕಲರ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ ಗಾಯನ ನೃತ್ಯ ಇರಲಿದೆ. ಕೇರ್ಗಳ್ಳಿಯ ಕಸ್ತೂರ್ಬಾ ಗಾಂಧಿ ಬಾಲಿಕಾ ಶಾಲೆ ವಿದ್ಯಾರ್ಥಿಗಳಿಂದ ಸಾವಿತ್ರಿಯ ಸವಾಲು ನಾಟಕ, ಕಡಕೊಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ವೀರ ಅಭಿಮನ್ಯು ನಾಟಕ, ರಾಮಕೃಷ್ಣ ನಗರದ ನೃಪತುಂಗ ಕನ್ನಡ ಶಾಲೆ ವಿದ್ಯಾರ್ಥಿಗಳಿಂದ ತಟ್ಟಿರಿ ಚಪ್ಪಾಳೆ, ದೊಡ್ಡ ಮಕ್ಕಳೇ ನಾಟಕ, ಗೋಪಾಲಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಪಂಜರ ಶಾಲೆ ನಾಟಕದ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಟ್ರಸ್ಟಿ ಸುಮಾ ಕೃಷ್ಣಮೂರ್ತಿ, ಕೇರ್ಗಳ್ಳಿ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದ ಮುಖ್ಯಶಿಕ್ಷಕಿ ಪಿ.ಜಿ.ಸಂಕಲ್ಪರಾಜ್, ಗೋಪಾಲಸ್ವಾಮಿ ಪ್ರೌಢಶಾಲೆಯ ಶಿಕ್ಷಕ ನಾಗರಾಜ್, ಸಂಸ್ಕೃತಿ ಸುಬ್ರಹ್ಮಣ್ಯ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT