ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರೊಂದಿಗೆ ಮಾತಿನ ಚಕಮಕಿ

ಶಿವ ದೇಗುಲಕ್ಕೆ ಬೀಗ ಹಾಕಿ, ವಿಡಿಯೊ ಮಾಡುತ್ತಿದ್ದವರನ್ನು ಹೊರದಬ್ಬಿದ ಹೋರಾಟಗಾರರು
Last Updated 14 ಸೆಪ್ಟೆಂಬರ್ 2021, 6:18 IST
ಅಕ್ಷರ ಗಾತ್ರ

ಮೈಸೂರು: ನಿರಂಜನ ಮಠ ಸಂರಕ್ಷಣಾ ಸಮಿತಿಯ ಕಾರ್ಯಕರ್ತರಿಗೂ, ಪೊಲೀಸರಿಗೂ ಸೋಮವಾರ ಕೆಲಕಾಲ ವಾಗ್ವಾದ ನಡೆಯಿತು.

ಅನ್ಯಧರ್ಮೀಯರು ಪೂಜೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಮಠದ ಆವರಣದಲ್ಲಿರುವ ಶಿವ ದೇಗುಲಕ್ಕೆ ಬೀಗ ಹಾಕಿದರು. ಈ ವೇಳೆ ಸ್ಥಳಕ್ಕೆ ಬಂದ ಇನ್‌ಸ್ಪೆಕ್ಟರ್ ದಿವಾಕರ್, ‘ಈ ರೀತಿ ಮಾಡುವುದು ತಪ್ಪು. ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಮನವಿ ಮಾಡಿದರು. ಈ ಹಂತದಲ್ಲಿ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಮಠದ ಆವರಣದಲ್ಲಿ ನಡೆಯುತ್ತಿದ್ದ ಸಭೆಯ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾರ್ಯ
ಕರ್ತರು ಹೊರದಬ್ಬಿದರು. ಮಠದ ಆವರಣದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ ತಿ.ನರಸೀಪುರ ತಾಲ್ಲೂಕಿನ ಮುಡುಕನಪುರ ಮಠದ ಕ್ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ ನಿರಂಜನ ಮಠ ಅಳಿಸಿ ಸ್ಮಾರಕ ನಿರ್ಮಾಣ ಮಾಡುವುದನ್ನು ರಾಮಕೃಷ್ಣ ಪರಮಹಂಸರು ಒಪ್ಪುತ್ತಿರಲಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT