ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಿಎಸ್‌ಟಿ ಪಾಲು ಕಡಿಮೆ ಏಕೆ’: ನಿರ್ಮಲಾ ಸೀತಾರಾಮನ್‌ಗೆ ವಿದ್ಯಾರ್ಥಿ ಪ್ರಶ್ನೆ

Last Updated 6 ಮಾರ್ಚ್ 2022, 19:27 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯಕ್ಕೆ ನೀಡುತ್ತಿರುವ ಜಿಎಸ್‌ಟಿ ಪಾಲನ್ನು ಕಡಿಮೆ ಮಾಡಿರುವುದೇಕೆ’ ಎಂದು ವಿದ್ಯಾರ್ಥಿಯೊಬ್ಬರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಶ್ನಿಸಿದರು.

ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ, ‘ಒಂದು ಸಣ್ಣ ರಾಜ್ಯದಿಂದ ಕಡಿಮೆ ಜಿಎಸ್‌ಟಿ ಸಂಗ್ರಹವಾಗುತ್ತಿದೆ ಎಂದು ಅದನ್ನು ನಿರ್ಲಕ್ಷಿಸಲಾಗದು. ಒಕ್ಕೂಟ ವ್ಯವಸ್ಥೆಯಲ್ಲಿ ಅಭಿವೃದ್ಧಿ ವಿಚಾರದ‌ಲ್ಲಿ ಎಲ್ಲ ರಾಜ್ಯಗಳನ್ನೂ ಸಮಾನವಾಗಿ ಕೇಂದ್ರ ಕಾಣಬೇಕಿದೆ. ಈ ನಿಟ್ಟಿನಲ್ಲಿ ನೀನು ಇನ್ನಷ್ಟು ಅಭ್ಯಸಿಸಬೇಕಿದೆ. ನಂತರ, ಇದು ಅರ್ಥವಾಗಲಿದೆ’ ಎಂದರು.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಹೈಟೆಕ್ ಪ್ಲಾನೆಟೋರಿಯಂಗೆ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮ ಇದಕ್ಕೆ ಸಾಕ್ಷಿ
ಯಾಯಿತು. ಸಚಿವೆ ನಿರ್ಗಮಿಸುವ ವೇಳೆ ವಿದ್ಯಾರ್ಥಿಗಳು ಮುಗಿಬಿದ್ದು ಸೆಲ್ಫಿ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT