ಗುರುವಾರ , ಡಿಸೆಂಬರ್ 1, 2022
27 °C

ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅವಕಾಶವಿಲ್ಲ: ಪ್ರತಿಮೆಗೆ ಬಟ್ಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಚಾಮುಂಡಿಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ, ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.

ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.

ಬೆಟ್ಟಕ್ಕೆ ತೆರಳುವ ವಾಹನಗಳನ್ನು ಪ್ರವೇಶಕ್ಕೆ ಮುನ್ನವೇ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅಲ್ಲಿ ಮಾಡಲಾಗಿದೆ.

‘ಮಹಿಷ ದಸರಾ ಆಚರಿಸಲು ಅನುಮತಿ ಕೋರಿ ತಮ್ಮ ಕಚೇರಿಗೆ ಯಾರೂ ಮನವಿ ಸಲ್ಲಿಸಿಲ್ಲ’ ಎಂದು ಚಂದ್ರಗುಪ್ತ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು