ಎನ್‌ಟಿಎಂ ಶಾಲೆ ಉಳಿವಿಗೆ ಪ್ರತಿಭಟನೆ: ಶಾಸಕ ಎನ್. ಮಹೇಶ್ ಭಾಗಿ

ಮೈಸೂರು: ಎನ್‌ಟಿಎಂ ಶಾಲೆ ಉಳಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾನುವಾರ ಶಾಸಕ ಎನ್. ಮಹೇಶ್ ಭಾಗಿಯಾಗಿ ಬೆಂಬಲ ಸೂಚಿಸಿದರು.
ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸದಸ್ಯರೂ ಪ್ರತಿಭಟನೆಗೆ ಕೈಜೋಡಿಸಿದರು.
ಎನ್.ಮಹೇಶ್ ಮಾತನಾಡಿ, ‘ಎನ್‌ಟಿಎಂ ಮಾದರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಪರಿವರ್ತಿಸಬೇಕು’ ಎಂದು ಒತ್ತಾಯಿಸಿದರು.
ಈ ಶಾಲೆಯನ್ನು ಕೆಡವಿ ಸ್ಮಾರಕ ಕಟ್ಟುವ ಮನಸ್ಸುಗಳಲ್ಲಿ ಸ್ವಾಮಿ ವಿವೇಕಾನಂದರು ಇಲ್ಲ ಎಂದು ಹರಿಹಾಯ್ದರು.
ಕಳೆದ 14 ದಿನಗಳಿಂದ ಬೀದಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಸರ್ಕಾರಕ್ಕೂ ಒಳ್ಳೆಯ ಹೆಸರು ತರುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಹೋರಾಟಗಾರರಾದ ಪ.ಮಲ್ಲೇಶ್, ಸ.ರ.ಸುದರ್ಶನ್, ಪ್ರೊ.ಪಿ.ವಿ.ನಂಜೇರಾಜ ಅರಸ್, ಪ್ರೊ.ಕೆ.ಎಸ್.ಭಗವಾನ್, ಮಾಜಿ ಮೇಯರ್ ಪುರುಷೋತ್ತಮ್, ಕರ್ನಾಟಕ ಕವಲು ಪಡೆ ಅಧ್ಯಕ್ಷ ಮೋಹನಕುಮಾರ್ ಗೌಡ, ಸೋಸಲೆ ಸಿದ್ದರಾಜು, ತಾಯೂರು ವಿಠಲಮೂರ್ತಿ, ಸುರೇಶ್‌ಬಾಬು, ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.