ಮೈಸೂರು: ‘ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿರುವುದು ನಿರಂತರ ಹೋರಾಟಕ್ಕೆ ಸಿಕ್ಕಿರುವ ಸಣ್ಣ ಜಯವಷ್ಟೆ’ ಎಂದು ಇಲ್ಲಿನ ಒಡನಾಡಿ ಸಂಸ್ಥೆಯ ಸಂಚಾಲಕ ಪರಶುರಾಂ ಪ್ರತಿಕ್ರಿಯಿಸಿದರು.

‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಇಬ್ಬರು ವಿದ್ಯಾರ್ಥಿನಿಯರಷ್ಟೆ ದೌರ್ಜನ್ಯಕ್ಕೆ ಒಳಗಾಗಿಲ್ಲ. ಆ ಮಠದ ವಸತಿನಿಲಯದಲ್ಲಿನ ಬಹಳಷ್ಟು ವಿದ್ಯಾರ್ಥಿನಿಯರು ಶೋಷಣೆಗೆ ಒಳಗಾಗಿದ್ದಾರೆ. ಅವರೂ ನೊಂದಿದ್ದಾರೆ; ನಲುಗಿದ್ದಾರೆ. ಹೀಗಾಗಿ, ಪ್ರಕರಣದ ಬಗ್ಗೆ ನ್ಯಾಯಾಂಗದ ಸುಪರ್ದಿಯಲ್ಲಿ ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಮಕ್ಕಳ ಪರವಾಗಿ ನಿರಂತರವಾಗಿ ಕೆಲಸ ಮಾಡಿದ ಪ್ರಯುಕ್ತ ತಡವಾದರೂ ಆರೋಪಿಯನ್ನು ಬಂಧಿಸಲಾಗಿದೆ. ತ್ವರಿತವಾಗಿ ಕ್ರಮ ಕೈಗೊಂಡಿದ್ದಲ್ಲಿ ಸರ್ಕಾರಕ್ಕೆ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚಿನ ಗೌರವ ಬರುತ್ತಿತ್ತು’ ಎಂದರು.

‘ಮುರುಘಾ ಮಠದಿಂದ ಹೊರಹೊಮ್ಮಿದ ಶ್ರೀಗಳು ಸೇರಿದಂತೆ ಹಲವು ಸ್ವಾಮೀಜಿಗಳು ಬಲಿಷ್ಠ ಮಠದ ಸ್ವಾಮೀಜಿಯನ್ನು ರಕ್ಷಿಸಲಿಕ್ಕೇ ನಿಂತರೇ ಹೊರತು ದಿಕ್ಕಿಲ್ಲದವರ, ಬಡವರ ಹಾಗೂ ನೊಂದವರ ಪರವಾಗಿ ನಿಲ್ಲಲಿಲ್ಲ. ಇದು ನೊಂದವರಿಗೆ ಮಾಡಿದ ಅವಮಾನವಲ್ಲದೇ ಮತ್ತೇನೂ ಅಲ್ಲ’ ಎಂದು ತಿಳಿಸಿದರು.

ಶ್ರೀಗಳ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣವನ್ನು ಒಡನಾಡಿ ಸಂಸ್ಥೆ ಬೆಳಕಿಗೆ ತಂದಿತ್ತು.

ಓದಿ... ಲೈಂಗಿಕ ಕಿರುಕುಳ ಪ್ರಕರಣ: ಶಿವಮೂರ್ತಿ ಮುರುಘಾ ಶರಣರ ಬಂಧನ

ಲೈಂಗಿಕ ಕಿರುಕುಳ ಆರೋಪ: ಮುರುಘಾ ಶ್ರೀ ಪ್ರಕರಣ ವರ್ಗಾವಣೆಗೆ ಆಗ್ರಹ

ಮುರುಘಾಶರಣರ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಆರಗ ವಿರುದ್ಧ ದೂರು

ಲೈಂಗಿಕ ದೌರ್ಜನ್ಯ ಆರೋಪ: ಮಠಕ್ಕೆ ದೌಡಾಯಿಸಿದ ಪೊಲೀಸರು, ಅಜ್ಞಾತ ಸ್ಥಳಕ್ಕೆ ಶರಣರು?

ನ್ಯಾಯಾಧೀಶರ ಮುಂದೆ ಸಂತ್ರಸ್ತರ ಹೇಳಿಕೆ: ಮುರುಘಾ ಶರಣರ ಬೆನ್ನಿಗೆ ನಿಂತ ಮಠಾಧೀಶರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.