ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ ಗ್ರೂಪ್‌ನಲ್ಲಿ ಅಂಬೇಡ್ಕರ್‌ ಅವಹೇಳನ; ಪ್ರಕರಣ ದಾಖಲು

Last Updated 14 ಆಗಸ್ಟ್ 2020, 3:57 IST
ಅಕ್ಷರ ಗಾತ್ರ

ಮೈಸೂರು: ಫೇಸ್‌ಬುಕ್‌ ಗ್ರೂಪ್‌ವೊಂದರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಕುರಿತು ಅಶ್ಲೀಲವಾಗಿ ಸಂದೇಶಗಳನ್ನು ಪೋಸ್ಟ್‌ ಮಾಡಿರುವ ಸಂಬಂಧ ಅಶೋಕಪುರಂ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಡಾ.ಅಂಬೇಡ್ಕರ್ ಭೀಮಸೇನಾ ಫೇಸ್‌ಬುಕ್‌ ಗ್ರೂಪ್‌ವೊಂದರಲ್ಲಿ ಸುನಾಮಿ ನಂದನ್‌ ಹಾಗೂ ಅರುಣ್‌ ಗೌಡ ಎಂಬುವವರು ದ್ವೇಷ ಬಿತ್ತುವ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ ಎಂದು ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗದ ಆಧಾರದ ಮೇಲೆ ದ್ವೇಷ ಬಿತ್ತುವುದು), 505 (ಸಾರ್ವಜನಿಕರಲ್ಲಿ ಭೀತಿ ಅಥವಾ ಆತಂಕಕ್ಕೆ ಕಾರಣವಾಗಬಲ್ಲ ವಿಷಯಗಳು/ಗಾಳಿ ಸುದ್ದಿ ಹಬ್ಬುವುದು), 509 (ಅವಹೇಳನಕಾರಿ ಮಾತು, ವರ್ತನೆ) ಅನ್ವಯ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT