ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಪರೇಷನ್‌ ಕಮಲ’ದ ಅಗತ್ಯವಿಲ್ಲ: ಎಸ್‌.ಟಿ.ಸೋಮಶೇಖರ್‌

Last Updated 30 ಮೇ 2020, 15:55 IST
ಅಕ್ಷರ ಗಾತ್ರ

ಮೈಸೂರು: ‘ಈಗ ನಮಗೆ ಬಹುಮತ ಇದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರ ಸುಗಮವಾಗಿ ಸಾಗುತ್ತಿದೆ. ಆಪರೇಷನ್‌ ಕಮಲದ ಅಗತ್ಯವಿಲ್ಲ’ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಶನಿವಾರ ಇಲ್ಲಿ ಹೇಳಿದರು.

ಹೈಕಮಾಂಡ್‌ ಒಪ್ಪಿದರೆ ಕಾಂಗ್ರೆಸ್‌ನ ಐವರು ಶಾಸಕರ ರಾಜೀನಾಮೆ ಕೊಡಿಸುವೆ ಎಂದು ಸಚಿವ ರಮೇಶ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅದು ಅವರ ವೈಯಕ್ತಿಕ ಅಭಿಪ್ರಾಯ. ಆ ಕುರಿತು ಅವರನ್ನೇ ಕೇಳಬೇಕು. ನಮ್ಮಲ್ಲಿ ಶಿಸ್ತು ಇದೆ, ಹೈಕಮಾಂಡ್‌ ಇದೆ. ಎಲ್ಲರೂ ಹೈಕಮಾಂಡ್‌ ಸೂಚನೆ ಪಾಲಿಸಬೇಕಾಗುತ್ತದೆ’ ಎಂದರು.

‘ಯಡಿಯೂರಪ್ಪ ಅವರು ಪ್ರತಿ ಜಿಲ್ಲೆಯ ಶಾಸಕರ ಜತೆ ಕಳೆದ 3–4 ತಿಂಗಳುಗಳಿಂದ ಸಭೆ ನಡೆಸುತ್ತಾ ಬಂದಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅನಗತ್ಯ ಹೇಳಿಕೆಗಳನ್ನು ಯಾರೂ ಕೊಡಬಾರದು. ಪಕ್ಷದಲ್ಲಿ ಎಲ್ಲರೂ ತೃಪ್ತರಾಗಿದ್ದಾರೆ’ ಎಂದು ತಿಳಿಸಿದರು.

‘ಎಂಎಲ್‌ಸಿ ಮತ್ತು ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕೆಲವು ಶಾಸಕರು ಸಭೆ ನಡೆಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT