ಮಂಗಳವಾರ, ಡಿಸೆಂಬರ್ 7, 2021
19 °C

ಬಿಜೆಪಿಗೂ ಅವಕಾಶ; ಸಿ.ಬಸವೇಗೌಡಗೆ ಟಿಕೆಟ್‌ ನೀಡಲು ಕೇಳುವೆ: ಶ್ರೀನಿವಾಸ ಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಮೈಸೂರು–ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೂ ಗೆಲುವಿನ ಅವಕಾಶವಿದೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಸೋಮವಾರ ಇಲ್ಲಿ ತಿಳಿಸಿದರು.

‘ಸಿ.ಬಸವೇಗೌಡಗೆ ಟಿಕೆಟ್‌ ಕೊಡುವಂತೆ ಯಾರಿಗೆ ಕೇಳಬೇಕು ಅವರನ್ನು ಕೇಳುವೆ. ಯಾರನ್ನು ಕೇಳುವೆ ಎಂಬುದು ಗೋಪ್ಯ. ಪಕ್ಷದ ಹೈಕಮಾಂಡ್‌ ನಿರ್ಧಾರವೇ ಅಂತಿಮ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳೇ ಪ್ರಾಬಲ್ಯ ಮೆರೆದಿದ್ದಾರೆ. ಹಿಂದಿನಂತೆಯೇ ಕಾಂಗ್ರೆಸ್‌ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು. ಜೆಡಿಎಸ್‌ ಪ್ರಾಬಲ್ಯ ತಗ್ಗಿದ್ದು, ಬಿಜೆಪಿ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದೆ. ಹಿಂದಿನ ಬಾರಿ ಸೋಲಾಗಿತ್ತು. ಈ ಬಾರಿ ಗೆಲುವಿನ ಅವಕಾಶವಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು