ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾರತ್ ಬಂದ್‌’ಗೆ ಸಂಘಟನೆಗಳ ಬೆಂಬಲ

ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆ ವಾಪಸ್‌ಗೆ ರೈತ ಸಂಘಟನೆಗಳ ಆಗ್ರಹ
Last Updated 7 ಡಿಸೆಂಬರ್ 2020, 13:28 IST
ಅಕ್ಷರ ಗಾತ್ರ

ಮೈಸೂರು: ಕೇಂದ್ರ ಸರ್ಕಾರ ಈಚೆಗಷ್ಟೇ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಡಿ.8ರ ಮಂಗಳವಾರ ಕರೆ ನೀಡಿರುವ ‘ಭಾರತ್‌ ಬಂದ್‌’ಗೆ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕಾರ್ಮಿಕ ದಲಿತ ಐಕ್ಯ ಹೋರಾಟ ಸಮಿತಿ, ಪ್ರಗತಿಪರರ ಒಕ್ಕೂಟ, ಕನ್ನಡ ಪರ ಸಂಘಟನೆಗಳು, ಕಬ್ಬು ಬೆಳೆಗಾರರ ಸಂಘ, ಎಪಿಎಂಸಿ ಮಂಡಿ ಮಾಲೀಕರ ಸಂಘ, ರೈತ ಸಂಘಟನೆಗಳು, ಸಿಪಿಐ, ಸಿಪಿಐಎಂ, ಎಐಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು, ಜಿಲ್ಲಾ ಕಾಂಗ್ರೆಸ್‌ ಘಟಕವೂ ಸಹ ಭಾರತ್‌ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಹಿಂದೂ ಪರ ಸಂಘಟನೆಗಳು, ಎಬಿವಿಪಿ, ಬಿಜೆಪಿ ಬಂದ್‌ಗೆ ಬೆಂಬಲ ಸೂಚಿಸಿಲ್ಲ.

‘ದೇಶದ ಎಲ್ಲೆಡೆ ಅನ್ನದಾತರು ಉಳಿವಿಗಾಗಿ ಹೋರಾಟ ಆರಂಭಿಸಿದ್ದಾರೆ. ಈ ಹೋರಾಟಕ್ಕೆ ಮೈಸೂರು-ಚಾಮರಾಜನಗರ ಒಕ್ಕಲಿಗ ಸಂಘವು ಬೆಂಬಲ ನೀಡಲಿದೆ’ ಎಂದು ಸಂಘದ ಅಧ್ಯಕ್ಷ ಜಿ.ಮಂಜು ತಿಳಿಸಿದ್ದಾರೆ.

ಹೋಟೆಲ್‌ ಮಾಲೀಕರ ಸಂಘ, ಟ್ಯಾಕ್ಸಿ, ಆಟೊ ಚಾಲಕರ ಸಂಘ, ಮಾರುಕಟ್ಟೆ ವ್ಯಾಪಾರಿಗಳ ಸಂಘ ನೈತಿಕ ಬೆಂಬಲ ಸೂಚಿಸಿವೆ. ಬಂದ್‌ಗೆ ನಮ್ಮ ನೈತಿಕ ಬೆಂಬಲವಿದೆ. ಆದರೆ ವ್ಯಾಪಾರ–ವಹಿವಾಟನ್ನು ಎಂದಿನಂತೆ ನಡೆಸಲಿದ್ದೇವೆ ಎಂದು ತಿಳಿಸಿವೆ. ಇದರಿಂದ ಮೈಸೂರಿನ ಬಹುತೇಕ ಮಾರುಕಟ್ಟೆಗಳು ಎಂದಿನಂತೆ ತೆರೆಯುವ ನಿರೀಕ್ಷೆಯಿದೆ.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಿದ ಸಂಘದ ಪದಾಧಿಕಾರಿಗಳು, ಹೋಟೆಲ್ ಉದ್ಯಮ ಈಗಾಗಲೇ ನೆಲಕಚ್ಚಿದೆ. ಬಂದ್‌ ಮಾಡುವುದು ಸೂಕ್ತವಲ್ಲ. ನೈತಿಕ ಬೆಂಬಲ ಘೋಷಿಸೋಣ ಎಂಬ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಿಂದ ಹೋಟೆಲ್‌ಗಳು ಎಂದಿನಂತೆ ಮಂಗಳವಾರವೂ ಕಾರ್ಯಾಚರಿಸಲಿವೆ.

ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್‌ ಸಹ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಕೋವಿಡ್‌–19, ಕರ್ನಾಟಕ ಬಂದ್‌ನಿಂದ ಟ್ರಾವೆಲ್ಸ್‌ ಉದ್ಯಮ ಈಗಾಗಲೇ ನೆಲ ಕಚ್ಚಿದೆ. ಭಾರತ್‌ ಬಂದ್‌ನಲ್ಲಿ ಭಾಗಿಯಾದರೆ ಮತ್ತಷ್ಟು ಹೊಡೆತ ಬೀಳಲಿದೆ. ಆದ್ದರಿಂದ ನೈತಿಕ ಬೆಂಬಲವನ್ನಷ್ಟೇ ನೀಡಲಿದ್ದೇವೆ ಎಂದು ಅಸೋಸಿಯೇಷನ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT